ಸುದೀಪ್ ಜೀವನದ ದುಬಾರಿ ಚಿತ್ರ “ಬಿಲ್ಲ ರಂಗ ಬಾಷಾ”; ಚಿತ್ರದ ಬಜೆಟ್ ಎಷ್ಟು ಕೋಟಿ ಗೊತ್ತ?

0
676

ಪೈಲ್ವಾನ್ ಚಿತ್ರದಲ್ಲಿ ಬ್ಯುಸಿಯಾಗಿರುವ ಕಿಚ್ಚ ಸುದೀಪ್ ಮುಂದೆ ಬಿಲ್ಲ ರಂಗ ಬಾಷಾ ಚಿತ್ರದಲ್ಲಿ ನಟಿಸಲಿದ್ದು ಇದು ಅವರ ಜೀವನದ ದುಬಾರಿ ಚಿತ್ರ ಎಂದು ಹೇಳಲಾಗುತ್ತಿದೆ.

ಹೌದು, ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶಿಸುತ್ತಿರುವ ಚಿತ್ರದಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದು ಈ ಚಿತ್ರದ ಬಜೆಟ್ ಬರೋಬ್ಬರಿ 75 ಕೋಟಿ ರುಪಾಯಿ ಎಂದು ಅಂದಾಜಿಸಲಾಗಿದೆ. ಸುದೀಪ್ ಅವರ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಬ್ಯಾನರ್ ನಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

 

 

 

 

 

 

ಸಾಹಸಮಯ ಚಿತ್ರವಾಗಿರುವುದರಿಂದ ಚಿತ್ರಕ್ಕೆ ಬಾರೀ ಬಜೆಟ್ ಅವಶ್ಯಕ ಎನ್ನಲಾಗಿದೆ. ಒನ್ಸ್ ಅಪಾನ್ ಎ ಟೈಮ್ ಇನ್ 2209 ಎಡಿ ಎಂಬ ಟ್ಯಾಗ್ ಲೈನ್ ಇಡಲಾಗಿದ್ದು ಕ್ರಿ.ಶ 2209ರ ಕಾಲಘಟ್ಟದಲ್ಲಿ ಕಥೆ ಸಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಸುದೀಪ್ ಪೈಲ್ವಾನ್, ಕೋಟಿಗೊಬ್ಬ 3, ಸೈರಾ ನರಸಿಂಹ ರೆಡ್ಡಿ, ದಬಾಂಗ್ 3 ಚಿತ್ರಗಳಲ್ಲಿ ಬಿಜಿಯಾಗಿದ್ದು ಈ ಚಿತ್ರಗಳ ಬಳಿಕ ಬಿಲ್ಲ ರಂಗ ಬಾಷಾ ಚಿತ್ರದ ಚಿತ್ರೀಕರಣದಲ್ಲಿ ಸುದೀಪ್ ತೊಡಗಿಕೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here