ಡಿಕೆಶಿ ತಿಹಾರ್ ಜೈಲಿನಲ್ಲಿ ಈವರೆಗೂ ಏನು ಮಾಡ್ತಾ ಇದ್ದರು ಗೊತ್ತಾ..?

0
30

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ ದಿನದಿಂದ ನೀರವ ಮೌನ ಕವಿದಿದ್ದ ಸಂಸದ ಡಿ.ಕೆ.ಸುರೇಶ್ ನವದೆಹಲಿ ನಿವಾಸ ಗುರುವಾರ ಲವಲವಿಕೆಯ ತಾಣವಾಗಿ ಮಾರ್ಪಟ್ಟಿತ್ತು. ತಿಹಾರ್ ಜೈಲಿನಲ್ಲಿ 36 ದಿನಗಳಿಂದ ಬಂಧಿಯಾಗಿದ್ದ ಡಿಕೆಶಿ, ದೆಹಲಿ ಹೈಕೋರ್ಟ್ ಬುಧವಾರ ನೀಡಿದ ಷರತ್ತಬದ್ಧ ಜಾಮೀನು ಮೇರೆಗೆ ಬಿಡುಗಡೆ ಹೊಂದಿ ಡಿ.ಕೆ.ಸುರೇಶ್ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ರಾಜ್ಯಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಡಿಕೆಶಿ ಭೇಟಿಗೆ ಬಂದಿದ್ದರಿಂದ ಸುರೇಶ್ ನಿವಾಸ ಜನಜಂಗುಳಿಯಿಂದ ಕೂಡಿತ್ತು. ಮಧ್ಯಾಹ್ನ ಮನೆಯಿಂದ ಹೊರಬಂದು ಮಾತನಾಡಿದ ಶಿವಕುಮಾರ್, 7 ಬಾರಿ ಶಾಸಕನಾಗಿರುವ ನನಗೆ ಕಾನೂನಿನ ಬಗ್ಗೆ ಗೌರವವಿದೆ. ಇಡಿ ಅಧಿಕಾರಿಗಳ ಎಲ್ಲ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡಿದ್ದೇನೆ. ಏನೇ ಬಂದರೂ ಎದುರಿಸಲು ಸಿದ್ಧವಾಗಿದ್ದೇನೆ.

 

 

ನಾನು ಯಾವ ತಪ್ಪೂ ಮಾಡಿಲ್ಲ. ತಾಯಿ ಗೌರಮ್ಮ, ಪತ್ನಿ ಉಷಾಗೆ ಸಮನ್ಸ್ ಜಾರಿ ಮಾಡಿದ್ದರ ಕುರಿತು ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ತಾಯಿಗೆ ವಯಸ್ಸಾಗಿರುವುದರಿಂದ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಕೋರಿದ್ದೇವೆ ಎಂದು ತಿಳಿಸಿದರು. ಇಡಿ ಅಧಿಕಾರಿಗಳು ಬಂಧಿಸಿ ಜೈಲಿಗೆ ಕಳುಹಿಸಿದಾಗ ನನ್ನ ಪರ ಬಿಜೆಪಿ, ಜೆಡಿಎಸ್, ಸಿಪಿಎಂ, ತೃಣಮೂಲ ಕಾಂಗ್ರೆಸ್ ಸೇರಿ ಇತರ ಪಕ್ಷಗಳ ನಾಯಕರು, ಕಾಂಗ್ರೆಸ್​ನ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಬೀದಿಗಿಳಿದು ಹೋರಾಟ ಮಾಡಿದ್ದಾರೆ.

ಬಿಡುಗಡೆಗೆ ನೆರವಾದ ವಕೀಲರಿಗೂ ಕೃತಜ್ಞನಾಗಿದ್ದೇನೆ. ಬಿಜೆಪಿಯ ಕೆಲ ನಾಯಕರು ಏನೇನು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ಮಾಧ್ಯಮದ ಮಂದಿ ಜವಾಬ್ದಾರಿ ಅರಿತು ವಾಸ್ತವವನ್ನು ತಿಳಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

 


ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.48 ದಿನಗಳ ಜೈಲು ವಾಸದ ನಂತರ ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಅವರಿಗೆ ಇಂದು ಷರತ್ತುಬದ್ಧ ಜಾಮೀನ ನೀಡಿದ್ದು, ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರಾತ್ರಿ 9 ಗಂಟೆ ಸುಮಾರಿಗೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಸಂಕಷ್ಟದ ಸಮಯದಲ್ಲಿ ನನ್ನ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ನಿಮ್ಮೆಲ್ಲರ ಶುಭ ಹಾರೈಕೆಯಿಂದ ನನಗೆ ಜಾಮೀನು ಸಿಕ್ಕಿದೆ. ನನ್ನ ಪರ ಹೋರಾಟ ನಡೆಸಿದ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಹಾಗೂ ವಕೀಲರಿಗೆ ಕೃತಜ್ಞತೆಗಳು ಎಂದರು. ಅಲ್ಲದೆ ನಾಳೆ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದರು.ಡಿಕೆಶಿ ಅವರನ್ನು ಸ್ವಾಗತಿಸಲು ಬೆಂಗಳೂರು ಗ್ರಾಮಾಂತರ ಸಂಸದ, ಸಹೋದರ ಡಿಕೆ ಸುರೇಶ್‌ ಹಾಗೂ ಹಲವಾರು ಬೆಂಬಲಿಗರು ಆಗಮಿಸಿದ್ದರು.

 

 

ಮಾಜಿ ಸಚಿವ ಜೈಲಿನಿಂದ ಹೊರಬರುತ್ತಿದ್ದಂತೆ ಬೆಂಬಲಿಗರ ವಿಜಯೋತ್ಸವ ಮುಗಿಲುಮುಟ್ಟಿತು.ದೆಹಲಿ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿ ಡಿಕೆಶಿ ಅವರಿಗೆ ಜಾಮೀನು ನೀಡಿದ್ದು, 25 ಲಕ್ಷ ರೂ ಠೇವಣಿ ಬಾಂಡ್ ನೀಡಬೇಕು, ಪಾಸ್‌ಪೋರ್ಟ್ ಕೋರ್ಟ್ ವಶಕ್ಕೆ ಸಲ್ಲಿಸಬೇಕು, ವಿದೇಶಕ್ಕೆ ತೆರಳುವಂತಿಲ್ಲ, ಸಾಕ್ಷ್ಯ ನಾಶಪಡಿಸುವಂತಿಲ್ಲ ಹಾಗೂ ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.ಜಾಮೀನು ಸಿಕ್ಕ ಕಾರಣ ಡಿಕೆ ಶಿವಕುಮಾರ್ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿಸಿ ಕೊಳ್ಳುವಂತಿಲ್ಲ.

ಡಿಕೆಶಿವಕುಮಾರ್ ಗೆ ಅನಾರೋಗ್ಯವಿರುವ ಕಾರಣ ಜಾಮೀನು ಮಂಜೂರು ಮಾಡಿದ್ದು, ಪ್ರಚಾರ ಮಾಡಿದ್ದಲ್ಲಿ ಅಥವಾ ರಾಜಕೀಯಕ್ಕೆ ಸಂಬಂಧಿಸಿದಂತೆ ಭಾಷಣ ಮಾಡಿದ್ದಲ್ಲಿ ಇಡಿ ಮತ್ತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಡಿಕೆಶಿವಕುಮಾರ್ ಗೆ ನೀಡಿರುವ ಜಾಮೀನನ್ನು ರದ್ದುಪಡಿಸಬಹುದು ಎಂದು ಎಚ್ಚರಿಕೆ ನೀಡಿದೆ.ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆಶಿವಕುಮಾರ್ ಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ಆದೇಶದ ಪ್ರತಿ ಇಂದು ಸಂಜೆಯೊಳಗೆ ತಿಹಾರ್ ಜೈಲು ಅಧೀಕ್ಷರ ಕೈಗೆ ತಲುಪಿದ್ದು ತಡರಾತ್ರಿ 9.45ಕ್ಕೆ ಡಿಕೆ ಶಿವಕುಮಾರ್ ತಿಹಾರ್ ಬಿಡುಗಡೆಯಾದರು.ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ನೀಡುವ ವೇಳೆ ಕೋರ್ಟ್​ ಹಾಲ್​ನಲ್ಲಿ ಅನೇಕ ಮಂದಿ ಸೇರಿದ್ದರು.

 

 

ಸಂಸದ ಡಿ.ಕೆ.ಸುರೇಶ್​ ಕೋರ್ಟ್ ಹಾಲ್​ನಲ್ಲಿ ಇದ್ದರು.2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು.ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಸೆಪ್ಟಂಬರ್ 19 ರಂದು ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು.

ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

 

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ.ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

ಮತ್ತಷ್ಟು ಇಂಟರೆಸ್ಟಿಂಗ್ ಸ್ಟೋರಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ಇದರ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ಕಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು.(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here