ಕನ್ನಡ ಬರಲ್ಲ ಅಂದ ರಶ್ಮಿಕಾಗೆ ಜಗ್ಗೇಶ್ ಎಚ್ಚರಿಕೆ..! “ಚಪ್ಪಲಿ ತಗೊಂಡು ಹೊಡಿತಿನಿ” ವಿಡಿಯೋ ನೋಡಿ

0
187

ರಶ್ಮಿಕಾ ಮಂದಣ್ಣ ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿಯೊಂದಿಗೆ 2006 ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ಸಂದರ್ಶನವೊಂದರಲ್ಲಿ ನನಗೆ ಕನ್ನಡ ಮಾತನಾಡಲು ಬರಲ್ಲ ಅಂತ ಹೇಳಿದ್ದಾರೆ.

ಈ ಹೇಳಿಕೆಗೆ ನವರಸನಾಯಕ ಜಗ್ಗೇಶ್ ಕನ್ನಡ ಪ್ರೇಕ್ಷಕರ ಚಪ್ಪಾಳೆ ಬಿದ್ದೆ ನಿಮ್ಮ ಬೆಳವಣಿಗೆಯಾಗಿದ್ದು ನೆನಪಿನಲ್ಲಿಡಿ ಎಂದು ಎಚ್ಚರಿಸಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ ಆಗಿರುವ ಸುದ್ದಿಯನ್ನು ರೀಟ್ವೀಟ್ ಮಾಡಿ ಜಗ್ಗೇಶ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಕನ್ನಡ ಚಿತ್ರರಂಗದ ಆಶೀರ್ವಾದ ಪಡೆದು ಬೆಳೆದು ಪರಭಾಷೆಗೆ ಹೋಗಿ ಅಲ್ಲಿಯೂ ಬೆಳೆದ ಅನೇಕ ಸ್ನೇಹಿತರಿದ್ದಾರೆ
ಅವರೆಲ್ಲರೂ ಇಂದು ಕನ್ನಡದಲ್ಲಿ ಮಾತನಾಡಿ ಕನ್ನಡವನ್ನು ಅಪಾರ ಗೌರವಿಸುತ್ತಾರೆ.(ಈ ಕೆಳಗಿರುವ ವಿಡಿಯೋ ನೋಡಿ)

 

 

View this post on Instagram

 

A post shared by 🇰 🇺 🇲 🇦 🇷 🇦 🇷 🇾 🇦 🇳 (@kumar_aryan_5) on

 

ಅದು ಅವರು ಕನ್ನಡದ ಸಂಸ್ಕೃತಿ ಆ ಗುಣವಿರದ ಇಂದಿನ ಪೀಳಿಗೆಯ ನಡವಳಿಕೆ ದುರದೃಷ್ಟಕರ
ಕನ್ನಡ ಪ್ರೇಕ್ಷಕರ ಚಪ್ಪಾಳೆ ಬಿದ್ದು ನಿಮ್ಮ ಬೆಳವಣಿಗೆ ಆದದ್ದು ನೆನಪಿರಲಿಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ಇತ್ತೀಚಿಗೆ ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಕನ್ನಡ ಮಾತನಾಡಲು ತುಂಬಾ ಕಷ್ಟ
ನನಗೆ ಕನ್ನಡ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಾರೆ.ಇದರಿಂದ ಆಕ್ರೋಶಗೊಂಡ ಕನ್ನಡಪರ ಹೋರಾಟಗಾರರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾಗಳ ಬಗ್ಗೆ ಮಾತನಾಡುವಾಗ ಆಂಗ್ಲ ಭಾಷೆ ಬಳಸುತ್ತಾರೆ, ನನಗೆ ಕನ್ನಡ ಸರಿಯಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಟಾಲಿವುಡ್ ನಲ್ಲಿ ಒಂದು ಸಿನಿಮಾ ತೆರೆ ಕಾಣುವಷ್ಟರಲ್ಲಿ ಅವರು ಸ್ವಚ್ಛವಾಗಿ ತೆಲುಗು ಮಾತನಾಡಲು ಆರಂಭಿಸಿದ್ದರು ಎಂದು ಕನ್ನಡ ಹೋರಾಟಗಾರರು ದೂರಿನಲ್ಲಿ ಉಲ್ಲೇಖಿಸಿದ್ದರು.

 

View this post on Instagram

 

A post shared by udal pavya (@udal_pavya_) on

ಮತ್ತಷ್ಟು ಲೇಟೆಸ್ಟ್ ಸುದ್ದಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here