ವಯಸ್ಸಾದ ಮಹಿಳೆಯನ್ನೂ ಬಿಡಲಿಲ್ಲ ನಾಲ್ವರು ಕಾಮುಕರು !

0
319

ಗ್ರೇಟರ್ ನೋಯ್ಡಾದಲ್ಲಿ ತಲೆ ತಗ್ಗಿಸುವ ಘಟನೆ ನಡೆದಿದೆ. 55 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮನೆಯಲ್ಲಿ ಮಲಗಿದ್ದ ಮಹಿಳೆಯನ್ನು ಹೊತ್ತೊಯ್ದ ದುಷ್ಕರ್ಮಿಗಳು ತೋಟಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ದುಷ್ಕರ್ಮಿಗಳು ಮನೆಯನ್ನು ದೋಚಿದ್ದಲ್ಲದೆ, ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.

ಘಟನೆ ಗ್ರೇಟರ್ ನೋಯ್ಡಾದ ಹಳ್ಳಿಯೊಂದರಲ್ಲಿ ನಡೆದಿದೆ. ತೋಟದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಡಿತೆಗೆ ವೈದ್ಯಕೀಯ ಪರೀಕ್ಷೆ ನಡೆದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಮನೆಯ ಹೊರಗಿನ ತೆರೆದ ಕೋಣೆಯಲ್ಲಿ ಮಲಗಿದ್ದಳು ಎನ್ನಲಾಗಿದೆ.

ನಾಲ್ಕು ಮಂದಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳ ಹೆಸರು ಬಹಿರಂಗವಾಗಿದೆ. ಮನೆಯಲ್ಲಿದ್ದ ಆಭರಣಗಳನ್ನೂ ಅತ್ಯಾಚಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಘಟನೆ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.

LEAVE A REPLY

Please enter your comment!
Please enter your name here