ಸರಣಿಗೂ ಮುನ್ನ ಸ್ಟಾರ್ ಆಟಗಾರ ತಂಡದಿಂದಲೇ ಔಟ್

0
133

ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಭಾರತ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಆಸ್ಟ್ರೇಲಿಯಾ ವಿರುದ್ಧದ ಟಿ-20 ಹಾಗೂ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಬೆನ್ನು ನೋವಿಗೆ ತುತ್ತಾಗಿರುವ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಬೇಕೆಂದು ಟೀಂ ಇಂಡಿಯಾ ವೈದ್ಯಕೀಯ ತಂಡ ತಿಳಿಸಿದೆ. ಹೀಗಾಗಿ ಪಾಂಡ್ಯ ಟಿ-20 ಹಾಗೂ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಪಾಂಡ್ಯ ಬದಲು ಮತ್ತೊಬ್ಬ ಆಲ್ರೌಂಡರ್​​​​ ಆಟಗಾರ ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿದೆ.

ರವೀಂದ್ರ ಜಡೇಜಾಗೆ ವಿಶ್ವಕಪ್ ತಂಡ ಸೇರಲು ಇದೊಂದು ಉತ್ತಮ ಅವಕಾಶವಾಗಿದ್ದು, ತಮ್ಮ ನೈಜ್ಯ ಪ್ರದರ್ಶನ ತೋರಬೇಕಿದೆ. ಇತ್ತ ಪಾಂಡ್ಯ ಪದೆ ಪದೆ ಇಂಜುರಿಗೆ ತುತ್ತಾಗುತ್ತಿರುಯವುದು ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

ಟಿ-20 ಸರಣಿಗೆ ಭಾರತ ತಂಡ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ-ನಾಯಕ), ಕೆ ಎಲ್ ರಾಹುಲ್, ಶಿಖರ್ ಧವನ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಎಂ ಎಸ್ ಧೋನಿ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕ್ರುನಾಲ್ ಪಾಂಡ್ಯ, ವಿಜಯ್ ಶಂಕರ್, ಯಜುವೇಂದ್ರ ಚಹಾಲ್, ಜಸ್​ಪ್ರೀತ್ ಬುಮ್ರಾ, ಉಮೇಶ್ ಯಾದವ್, ಸಿದ್ಧಾರ್ಥ್​ ಕೌಲ್, ಮಯಾಂಕ್ ಮಾರ್ಕಂಡೆ.

ಮೊದಲ ಎರಡು ಏಕದಿನ ಸರಣಿಗೆ ಭಾರತ ತಂಡ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ-ನಾಯಕ), ಶಿಖರ್ ಧವನ್, ಅಂಬಟಿ ರಾಯುಡು, ಕೇದರ್ ಜಾಧವ್, ಎಂ ಎಸ್ ಧೋನಿ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ವಿಜಯ್ ಶಂಕರ್, ಸಿದ್ಧಾರ್ಥ್​​​ ಕೌಲ್, ರಿಷಭ್ ಪಂತ್, ಕೆ ಎಲ್ ರಾಹುಲ್.

ಅಂತಿಮ ಮೂರು ಏಕದಿನ ಪಂದ್ಯಕ್ಕೆ ಭಾರತ ತಂಡ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ-ನಾಯಕ), ಶಿಖರ್ ಧವನ್, ಅಂಬಟಿ ರಾಯುಡು, ಕೇದರ್ ಜಾಧವ್, ಎಂ ಎಸ್ ಧೋನಿ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ವಿಜಯ್ ಶಂಕರ್, ರಿಷಭ್ ಪಂತ್, ಕೆ ಎಲ್ ರಾಹುಲ್.

LEAVE A REPLY

Please enter your comment!
Please enter your name here