ಬಿಜೆಪಿ ಸಂಸದೆ ಪ್ರಗ್ಯಾಸಿಂಗ್​​​ರನ್ನು ಜೀವಂತವಾಗಿ ಸುಡುತ್ತೇನೆ ಎಂದ ಕಾಂಗ್ರೆಸ್ ಶಾಸಕ

0
9

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಮಧ್ಯಪ್ರದೇಶಕ್ಕೆ ಕಾಲಿಟ್ಟರೆ ಜೀವಂತವಾಗಿ ಸುಟ್ಟು ಹಾಕೋದಾಗಿ ಕಾಂಗ್ರೆಸ್ ಶಾಸಕನೊಬ್ಬ ಬೆದರಿಕೆ ಹಾಕಿದ್ದಾನೆ. ಬಿಯೋರಾ ಕಾಂಗ್ರೆಸ್ ಶಾಸಕ ಗೋವರ್ಧನ್ ಡಂಗಿ ಈ ವಿವಾದಾತ್ಮಕ ಹೇಳಿಕೆಯನ್ನು ಕೊಟ್ಟಿದ್ಧಾರೆ.

2 ದಿನಗಳ ಹಿಂದೆ ಸಂಸತ್​ನಲ್ಲಿ ಎಸ್​​ಪಿಜಿ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ಗಾಂಧೀಜಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದರು. ಇದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ಒಂದು ದೊಡ್ಡ ಅಸ್ತ್ರವಾಗಿ ಪರಿಣಮಿಸಿದೆ. ಅಲ್ಲದೆ ಇದೇ ವಿಚಾರವಾಗಿ ನಿನ್ನೆ ವಿಪಕ್ಷಗಳು ಸದನವನ್ನು ಬಹಿಷ್ಕರಿಸಿ ಹೊರನಡೆದಿದ್ದವು.

ಇದ್ರ ಬೆನ್ನಲ್ಲೇ ಬೋಪಾಲ್ ಸಂಸದೆ ಪ್ರಗ್ಯಾಸಿಂಗ್ ಹೇಳಿಕೆಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್​​​ನ ಶಾಸಕ ನಾಲಗೆ ಹರಿಬಿಟ್ಟಿದ್ದು, ಮತ್ತೊಂದು ವಿವಾದ ಶುರುವಾಗಿದೆ.

LEAVE A REPLY

Please enter your comment!
Please enter your name here