ದೇವಸ್ಥಾನಕ್ಕೆ ತೆರಳಿದ ಯುವತಿಯ ಮೇಲೆ ಅತ್ಯಾಚಾರ!

0
9

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಯುವತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಮುಕರು ಅವಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ.ತೆಲಂಗಾಣದ ಹನುಮಕೊಂಡ ನಗರದಲ್ಲಿ 19 ವರ್ಷದ ಯುವತಿಯ ಮೇಲೆ ಪಾಪಿಗಳು ಅತ್ಯಾಚಾರ ನಡೆಸಿದ್ದಾರೆ. ಹುಟ್ಟು ಹಬ್ಬವಾದ್ದರಿಂದ ಯುವತಿ ಬುಧವಾರ ಬೆಳಿಗ್ಗೆ ಸ್ನಾನ ಮಾಡಿ ದೇವರಿಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಲ್ಲದೇ, ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ.

ಹಲವು ಗಂಟೆಗಳು ಕಳೆದರೂ ಯುವತಿ ಬಾರದ್ದರಿಂದ ಭಯಭೀತರಾಗಿ ಕರೆ ಮಾಡಿ ಸಂಪರ್ಕಿಸಲು ಕುಟುಂಬಸ್ಥರು ಯತ್ನಿಸಿದ್ದಾರೆ. ಆದರೆ ಅವಳ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ಯುವತಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಎಚ್ಚೆತ್ತ ಯುವತಿಯ ಪೋಷಕರು, ಪೊಲೀಸ್ ಠಾಣೆಗೆ ತೆರಳಿ ಕಾಣೆಯಾಗಿರುವ ಕುರಿತು ದೂರೂ ನೀಡಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಯುವತಿಯನ್ನು ಹುಡುಕಲು ಪೊಲೀಸ್ ತಂಡ ರಚಿಸಿದ್ದಾರೆ. ತಡರಾತ್ರಿ ಯುವತಿಯ ದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವಾರಂಗಲ್‍ನ ಎಂಜಿಎಂ ಆಸ್ಪತ್ರೆಗೆ ಕಳುಹಿಸಲಾಗಿದೆ.

ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸುಳಿವನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ತನಿಖಾಧಿಕಾರಿಗಳು ಸಂತ್ರಸ್ತೆಯ ಮೊಬೈಲ್ ಕರೆಯ ದಾಖಲೆಗಳು ಹಾಗೂ ಸಿಸಿಟಿವಿ ಫೂಟೇಜ್‍ಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here