ಮೋದಿ ಹವಾ ಕಡಿಮೆ ಆಯ್ತಾ..? 45 ವರ್ಷಗಳಲ್ಲೇ ಭಾರೀ ನಿರುದ್ಯೋಗ ಸಮಸ್ಯೆ, ಕೇಂದ್ರ ಸರ್ಕಾರಕ್ಕೆ ಸಂಕಷ್ಟ !

0
153

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಸರ್ಕಾರದ ಬಗ್ಗೆ ಜನ ಸಾಮಾನ್ಯನಲ್ಲಿ ನಂಬಿಕೆ ಕಡಿಮೆಯಾಗುವಂಥ ಸುದ್ದಿಯೊಂದು ಹೊರಬಿದ್ದಿದೆ. ಬಿಸಿನೆಸ್ ಸ್ಟಾಂಡರ್ಡ್ ಪತ್ರಿಕೆಯ ವರದಿಯೊಂದರ ಪ್ರಕಾರ 2017-18 ರ ಅವಧಿಯಲ್ಲಿ ದೇಶ ಕಳೆದ 45 ವರ್ಷಗಳಲ್ಲಿ ಎಂದಿಗೂ ಎದುರಿಸದಷ್ಟು ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿದೆ. 1972-73 ರಲ್ಲಿ ಭಾರತದ ನಿರುದ್ಯೋಗ ಪ್ರಮಾಣ 6.1 ರಷ್ಟಿತ್ತು. ಆದರೆ 2017-18 ರಲ್ಲಿ ಈ ಪ್ರಮಾಣ ಮತ್ತಷ್ಟು ಕುಸಿದಿದೆ.

ನಗರ ಪ್ರದೇಶದಲ್ಲಿ ನಿರುದ್ಯೋಗದ ಪ್ರಮಾಣ 7.8 ರಷ್ಟಿದ್ದರೆ, ಗ್ರಾಮೀಣ ಪ್ರದೇಶದಲ್ಲಿ 5.3 ರಷ್ಟಿದೆ ಎಂದು ಈ ವರದಿ ಹೇಳಿದೆ.

ಅಪನಗದೀಕರಣದ ನಂತರ ಹೊರಬಿದ್ದ ಮೊದಲ ನಿರುದ್ಯೋಗ ಡೆಟಾ ಇದಾಗಿದ್ದು, ಈ ಸಂಖ್ಯೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಸೃಷ್ಟಿಸುವ ಸಾಧ್ಯತೆ ಇದೆ.

ಈಗಾಗಲೇ ಪ್ರಧಾನಿ ಮೋದಿ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವೈಫಲ್ಯ ಕಂಡಿದೆ, ನಿರುದ್ಯೋಗ ನಿವಾರಣೆಯ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಹೊರಬಿದ್ದ ಈ ವರದಿ ಕೇಂದ್ರ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದರೆ ಅಚ್ಚರಿಯಿಲ್ಲ.

 

ರಾಷ್ಟ್ರದಲ್ಲಿ ನಿರುದ್ಯೋಗ ಬೃಹತ್ ಪ್ರಮಾಣದಲ್ಲಿ ತಾಂಡವವಾಡುತ್ತಿದೆ ಎಂಬುದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಮತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಇತ್ತೀಚೆಗಷ್ಟೇ ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

LEAVE A REPLY

Please enter your comment!
Please enter your name here